BREAKING : ಮೇಲುಕೋಟೆಯ ಜಾತ್ರೆಯಲ್ಲಿ ಭಕ್ತರ ಮೇಲೆ ಹೆಜ್ಜೇನು ದಾಳಿ : 30ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಮಂಡ್ಯ : ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರವದ ಮೇಲುಕೋಟೆಯಲ್ಲಿ ಅಷ್ಟತೀರ್ಥೋತ್ಸವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದರಿಂದ ಘಟನೆಯಲ್ಲಿ 30 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ತೊಟ್ಟಿಲುಮಡು ಜಾತ್ರೆಯ ಅಷ್ಟತೀರ್ಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿದ್ದರು.

ಈ ವೇಳೆ ಈ ದುರ್ಘಟನೆ ನಡೆದಿದ್ದು, ಕೂಡಲೇ ಅಸ್ವಸ್ತರಾದವರನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

 

ಅಷ್ಟತೀರ್ಥೋತ್ಸವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಭಕ್ತರು, ಅಷ್ಟತೀರ್ಥೋತ್ಸವವನ್ನು ಕಣ್ತುಂಬಿಕೊಳ್ಳಲು ನೆರೆದಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದರು. ಈ ಹಿನ್ನಲೆ ಕರ್ಪೂರದ ಹೊಗೆಯಿಂದ ಏಕಾಎಕಿ ಹೆಜ್ಜೇನು ದಾಳಿ ಮಾಡಿದೆ.

 

ಕೂಡಲೇ ಭಕ್ತರು ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ದಿಕ್ಕಪಾಲಾಗಿ ಓಡಿದ್ದಾರೆ. ಹೆಜ್ಜೇನು ದಾಳಿಗೊಳಗಾದವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಂಭೀರವಾಗಿ ಗಾಯಗೊಂಡ 17 ಜನರನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಿಯಾಲ್ ನ್ಯೂಸ್ ಕನ್ನಡ

Real News Kannada com

 

विज्ञापन बॉक्स